ಶರಾವತಿ ನದಿ ಉಳಿಸಿ ಹೋರಾಟಕ್ಕೆ ಮರು ಜೀವ. ಹೋರಾಟದ ಮುನ್ಸೂಚನೆ ನೀಡಿದ ಪರಿಸರ ಪ್ರೇಮಿಗಳು
ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟದಿಂದ ಸೆ.29ರಂದು ಬೆಳಿಗ್ಗೆ 10.30ಕ್ಕೆ ಹೊಸನಗರದ ಮೂಲೆಗದ್ದೆ ಮಠದ ಆವರಣದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಬೆಂಗಳೂರಿಗೆ ಶರಾವತಿ ನದಿ ನೀರು ಕೊಂಡೊಯ್ಯುವ ಯೋಜನೆಗಳ ವಿರೋಧಿಸಿ ಸಭೆ ಕರೆಯಲಾಗಿದೆ.
ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಮುಂದಿನ ಹೋರಾಟದ ಯೋಜನೆಗಳ ರೂಪುರೇಷೆ ನಿರ್ಧರಿಸಲಾಗುತ್ತದೆ.
ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟ ಪ್ರಕಟಣೆಯಲ್ಲಿ ಮನವಿ ಮಾಡಿದೆ.
✍️ಸುಕುಮಾರ್ ಎಂ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ