Case of interlocutory petition filed by state government in Supreme Court of hearing victims: notice to central government | ಶರಾವತಿ ಸಂತ್ರಸ್ತರ ಪ್ರಕರಣ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್


ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ಸಂತ್ರಸ್ತರ ಪ್ರಕರಣ: ಕೇಂದ್ರಕ್ಕೆ ನೋಟಿಸ್‌. 

Feedback: smkformedia@gmail.com


ಶಿವಮೊಗ್ಗ: (Press Trust) 
ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿ ಡಿನೋಟಿಫಿಕೇಷನ್ ರದ್ದು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿ ಮಾಹಿತಿ ಕೇಳಿದೆ ಎಂದು ಕಾಂಗ್ರೆಸ್ ವಕ್ತಾರ ಬಿ.ಎ.ರಮೇಶ್ ಹೆಗ್ಡೆ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017 ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಸಂತ್ರಸ್ತರ ಭೂಮಿಯನ್ನು ಡಿನೋಟಿಫೈ ಮಾಡಿತ್ತು. ಅದನ್ನು ಗಿರೀಶ್ ಆಚಾರ್ಯ ಎಂಬುವವರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ಅವರು ಪ್ರಶ್ನೆ ಮಾಡಿದ್ದ ಕೂಡಿ ಮತ್ತು ಸೂಡೂರು ಸರ್ವೆ ನಂಬರುಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ನೀಡಿತ್ತು ಬಸವರಾಜ್ ಬೊಮ್ಮಾ ಯಿ ನೇತೃತ್ವದ ಬಿಜೆಪಿ ಸರ್ಕಾರ ಶರಾವತಿ ಸಂತ್ರಸ್ಥರ ಎಲ್ಲಾ 55 ಡಿನೋಟಿಫಿಕೇಷನ್‌ ಪ್ರಕರಣಗಳನ್ನು ರದ್ದು ಮಾಡಿತ್ತು ವಿರೋಧ ವ್ಯಕ್ತ ಮಾಡುತ್ತಿದ್ದಂತೆ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಮಾಹಿತಿ ಕೇಳಿತ್ತು. ಪತ್ರವನ್ನು ಸರಿಯಾಗಿ ಅರ್ಥೈಸದ ಬಿಜೆಪಿ ಸರಕಾರ ಕೇಂದ್ರಕ್ಕೆ ತಪ್ಪು ಮಾಹಿತಿ ನೀಡಿದ್ದರಿಂದ ಸಂತ್ರಸ್ತರ ಸಮಸ್ಯೆ ಕಗ್ಗಂಟಾಗಿತ್ತು ಎಂದರು.

ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿ ಗಳು ಸಭೆ ನಡೆಸಿ ಸೂಕ್ತ ತೀರ್ಮಾನಕ್ಕೆ ಬರುವಂತೆ ಉಸ್ತುವಾರಿ ಸಚಿವ ಸಚಿವ ಮಧು ಬಂಗಾರಪ್ಪ ಪತ್ರ ಬರೆದಿದ್ದಾರೆ. ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದರು ಈ ನೆಲೆಯಲ್ಲಿ ಪ್ರಯತ್ನಶೀಲರಾಗಬೇಕಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪ್ರಯತ್ನದಿಂದಾಗಿ ಸುಪ್ರೀಂ ಕೋರ್ಟಿಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಡಿ.3ರಂದು ಈ ಅರ್ಜಿಯ ವಿಚಾರಣೆ ನಡೆದು ಕೇಂದ್ರ ಸರಕಾರಕ್ಕೆ ನೋಟಿಸ್ ನೀಡಿದೆ. ಮುಂದಿನ ತಿಂಗಳು ಅರ್ಜಿ ವಿಚಾರಣೆಗೆ ಬರಲಿದ್ದು, ಅಷ್ಟರಲ್ಲಿ ಸಂಸದರು ಹಾಗೂ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಉತ್ತರ ಕೊಡಿಸಬೇಕು. ಈ ಬಗ್ಗೆ ನಮ್ಮ ಸಂಸದರು ಆಸಕ್ತಿ ವಹಿಸಬೇಕೆಂದು ರಮೇಶ್ ಹೆಗ್ಡೆ ಆಗ್ರಹಿಸಿದರು.



ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಶರಾವತಿ ಸಂತ್ರಸ್ಥರ ಪ್ರಕರಣವನ್ನು ನ್ಯಾಯಾಲಯದಲ್ಲಿ ಸರಿಯಾಗಿ ನಿರ್ವಹಿಸುವಲ್ಲಿ ವಿಫಲಾಗಿದೆ. ಒಂದು ಸರ್ವೆ ನಂಬರ್‌ಗೆ ಇದ್ದ ಆದೇಶವನ್ನು ಇಡೀ ಮುಳುಗಡೆ ಸಂತ್ರಸ್ತರ ಮೇಲಿದೆ ಎಂದು ತಪ್ಪು ಗ್ರಹಿಕೆ ಮಾಡಿ ಅನ್ಯಾಯ ಮಾಡಲಾಗಿದೆ.

ಕೇಂದ್ರಕ್ಕೆ ಬಿಜೆಪಿ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಸಂತ್ರಸ್ಥರಿಗೆ ಸಂಬಂಧಿ ಸದ ರಿಟ್ ಪಿಟಿಷನ್ ರೆಫರೆನ್ಸ್ ನೀಡಲಾಗಿತ್ತು. ಸಂಬಂಧ ಪಡದ ಆದೇಶವನ್ನು ಕೋಟ್ ಮಾಡಿ ಪ್ರಸ್ತಾವನೆ ಸಲ್ಲಿಸಲಾ ಗಿತ್ತು ಬಿಜೆಪಿಯವರ ಈ ಅನ್ಯಾಯದಿಂದಾಗಿ ಶರಾವತಿ ಸಂತ್ರಸ್ತರ 9129 ಎಕರೆ ಭೂಮಿಯನ್ನು ಅರಣ್ಯ ಎಂದು ನೋಟಿಫಿ ಕೇಷನ್ ಮಾಡಲಾಗಿದೆ ಎಂದು ಅವರು ದೂರಿದರು.


ಸುಪ್ರೀಂ ಕೋರ್ಟ್ ವಿಚಾರಣೆ ಸಂದರ್ಭ ಸೂಕ್ತ ದಾಖಲೆ ಮತ್ತು ಸಮರ್ಥ ವಾದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವಕೀಲರನ್ನು ನೇಮಿಸಿದೆ. ಈಗ ಕೇಂದ್ರಸರ್ಕಾರದ ಕಡೆಯಿಂದ ಪ್ರಯತ್ನ ಆಗಬೇಕು. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ವಾಸ್ತವ ಸಂಗತಿ ಮನವರಿಕೆ ಮಾಡಬೇಕಿದೆ ಈ ದಿಸೆಯಲ್ಲಿ ಪ್ರಯತ್ನ ನಡೆಬೇಕಿದೆ ಎಂದು ರಮೇಶ್ ಹೆಗ್ಡೆ ಅಭಿಪ್ರಾಯಪಟ್ಟರು. ಪತ್ರಿಕಾ ಗೋಷ್ಠಿಯಲ್ಲಿ ಪ್ರಮುಖರಾದ ಎಸ್.ರವಿಕುಮಾರ್, ಜಿ.ಡಿ. ಮಂಜುನಾಥ್,ಇಕ್ಕೇರಿ ರಮೇಶ್, ಎನ್.ಪಿ.ಧರ್ಮರಾಜ್, ಡಿ.ಸಿ.ನಿರಂಜನ್‌, ಎಂ.ಬಿ.ರಾಜಪ್ಪ, ರಘುಪತಿ ಕಟ್ಟಿಗೆ ಹಳ್ಳ, ಲಕ್ಷ್ಮಣಗೌಡ ಮತ್ತಿತರರು ಇದ್ದರು.


ಕೃಪೆ: Malenadu mitra

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

High alert in Sharavati project area. ಭಾರತ ಮತ್ತು ಪಾಕಿಸ್ತಾನ ನಡುವೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಕಾರಣ ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಕರ್ನಾಟಕ ವಿದ್ಯುತ್‌ ನಿಗಮದ (ಕೆಪಿಸಿ) ಭದ್ರತಾ ವ್ಯವಸ್ಥೆಯನ್ನು ಹೈ ಅಲರ್ಟ್ ಮಾಡಿ ಇರಿಸಲಾಗಿದೆ.

ಚಂದ್ರಗ್ರಹಣ: ಸಿಗಂದೂರಿನಲ್ಲಿ ಯಾವುದೇ ಬದಲಾವಣೆ ಇಲ್ಲ.

ಯೋಜನಾ ಸಂತ್ರಸ್ತರು ಹಾಗೂ ಭೂ ಹಕ್ಕಿನ ಸಮಸ್ಯೆ ನಿವಾರಣೆಗೆ ಟಾಸ್ಕ್ ಫೋರ್ಸ್ ರಚನೆ ಅಗತ್ಯ: ಸಚಿವ ಎಸ್ ಮಧು ಬಂಗಾರಪ್ಪ